Karnataka News

*ಐಷಾರಾಮಿ ಬೈಕ್ ಶೋ ರೂಂ ಸುಟ್ಟು ಕರಕಲು*

ಪ್ರಗತಿವಾಹಿನಿ ಸುದ್ದಿ : ಬೆಂಗಳೂರಿನಲ್ಲಿ ಮತ್ತೊಂದು ಐಷಾರಾಮಿ ಬೈಕ್ ಶೋ ರೂಂ ನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿವೆ.

ಮಹದೇವಪುರ ವ್ಯಾಪ್ತಿಯ ಬಿ. ನಾರಾಯಣಪುರದಲ್ಲಿ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 

Home add -Advt

ಯಮಹಾ ಬೈಕ್ ಶೋರೂಂನಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿ ಇಡೀ ಶೋರೂಂಗೆ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಬೈಕ್ ಗಳು ಸುಟ್ಟು ಕರಕಲಾಗಿವೆ. ಶೋರೂಂನಲ್ಲಿದ್ದ ಸುಮಾರು 30 ಬೈಕ್, ಹಿಂಭಾಗ ಸರ್ವೀಸ್ ಸೆಂಟರ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಎರಡು ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button