Latest

ಆಸ್ಪತ್ರೆಯಲ್ಲಿದ್ದಾರೆ 10 ಲಕ್ಷ ಜನ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಹಾವಳಿ ಮುಂದುವರಿದಿದ್ದು, ಸೋಂಕಿತರ ಸಂಖ್ಯೆ 59 ಲಕ್ಷ ಗಡಿ ದಾಟಿದೆ. ಕಳೆದ 24ಗಂಟೆಯಲ್ಲಿ 85,362 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 59,03,933ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,089 ಜನರು ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 93,379ಕ್ಕೆ ಏರಿಕೆಯಾಗಿದೆ.

Home add -Advt

ಇನ್ನು 9,60,969 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 48,49,585 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ 13,41,535 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈ ವರೆಗೆ 7,02,69,975 ಜನರನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Related Articles

Back to top button