Belagavi NewsBelgaum NewsKarnataka News

*ಮುಂದಿನ ‌ನಾಲ್ಕು ದಿನ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಜೋರಾಗಿದ್ದು, ಇದೀಗ ಮುಂದಿನ ನಾಲ್ಕು ದಿನಗಳು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಹವಾಮಾನ ಇಲಾಖೆಯ ವರದಿಯಂತೆ, ಮೇ 18ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಚಿಕ್ಕಮಗಳೂರು, ಹಾಸನ, ತುಮಕೂರು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ಇನ್ನಿತರ ಭಾಗದಲ್ಲಿ ಭಾರೀ ಮಳೆಯಾಗಲಿದೆ.

Home add -Advt

ಇನ್ನು ಉತ್ತರ ಒಳನಾಡಿನ ಭಾಗಗಳಾದ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬಿಜಾಪುರ, ಬೀದ‌ರ್, ಕೊಪ್ಪಳ, ಹಾವೇರಿ, ಕಲಬುರಗಿ, ಯಾದಗಿರಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 19 ರಂದು ಕೂಡ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಮೇ.20 ರಂದು ಕೂಡ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 20 ರಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಉತ್ತರ ಒಳನಾಡಿನ ಭಾಗದಲ್ಲಿ ಮಳೆಯಾಗಿದ್ದು ಅರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಮೇ.21 ಹಾಗೂ 22 ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಎಂದು ಇಲಾಖೆಯು ಮುನ್ಸೂಚನೆ ನೀಡಿದೆ.

Related Articles

Back to top button