Latest

ಕಾರು-ಆಟೋ ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಕಾರು ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.

ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಸ್ತೆ ಪಕ್ಕದಲ್ಲಿದ್ದ ಗುಂಡಿಗೆ ಉರುಳಿ ಬಿದ್ದಿದೆ. ಆಟೋ ಮೇಲೆ ಕಾರು ಬಿದ್ದಿದ್ದು, ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಟೋ ಸಂಪೂರ ನುಜ್ಜುಗುಜ್ಜಾಗಿದೆ.

Home add -Advt

ಮೃತರನ್ನು ಆಟೋಚಾಲಕ ಶ್ರೀನಿವಾಸ್, ರವಿ ಕುಮಾರ್ ಹಾಗೂ ಭಾಸ್ಕರ್ ಎಂದು ಗುರುತಿಸಲಾಗಿದೆ. ಮಳವಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಕಿಕ್ ಬಾಕ್ಸಿಂಗ್ ಸ್ಪರ್ಧೆ; ಗಾಯಗೊಂಡಿದ್ದ ಯುವಕ ಸಾವು

Related Articles

Back to top button