Kannada NewsLatest

ಖಾನಾಪುರದಲ್ಲಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಖಾನಾಪುರ: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ.

ಇಲ್ಲಿನ ರುಮೇವಾಡಿ ನಾಕಾ ಬಳಿ ವೇಗವಾಗಿ ಬಂದ ಟಿಪ್ಪರ್ ಎರಡು ಬೈಕ್ ಗಳಿಗೆ ಗುದ್ದಿದ್ದು, ಪರಿಣಾಮ ಒಂದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಮೃತರನ್ನು ಹಿಡಲಗ ಗ್ರಾಮದ ಪ್ರವೀಣ್ ಮಾರುತಿ ಕೋಲಕಾರ ಹಾಗೂ ಅವರ ಮಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಖಾನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PSI ನೇಮಕಾತಿ ಅಕ್ರಮ; ದೈಹಿಕ ಶಿಕ್ಷಕ ಅರೆಸ್ಟ್

https://pragati.taskdun.com/psi-scampt-teacherarrestedcid/

Related Articles

Back to top button