Latest

ಬಿಜೆಪಿ ಯುವ ಮೋರ್ಚಾ ನಾಯಕನ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಬಿಜೆಪಿ ಯುವ ಮೋರ್ಚಾ ನಾಯಕ ಮಿಥುನ್ ಘೋಷ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ ದಿನಾಜ್ ಪುರ ಜಿಲ್ಲೆಯ ಇಟಾಹಾರ್ ನಲ್ಲಿ ನಡೆದಿದೆ.

ರಾಜ್ ಗ್ರಾಮ ಹಳ್ಳಿಯಲ್ಲಿರುವ ಮನೆ ಮುಂದೆಯೇ ದುಷ್ಕರ್ಮಿಗಳು ಮಿಥುನ್ ಘೋಷ್ ಅವರಿಗೆ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಟಿಎಂಸಿ ಕಾರ್ಯಕರ್ತರೇ ಈ ಕೃತ್ಯ ಎಸಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

Home add -Advt

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಮಿಥುನ್ ಘೋಷ್ ಅವರು ಬಿಜೆಪಿ ಯುವ ಮೋರ್ಚಾದ ಉತ್ತರ ದಿನಾಜ್ ಪುರ ಜಿಲ್ಲೆಯ ಉಪಾಧ್ಯಕ್ಷರಾಗಿದ್ದರು. ಇಟಾಹರ್ ನಲ್ಲಿ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಇದರ ಹಿಂದೆ ಖಂಡಿತವಾಗಿ ಟಿಎಂಸಿ ಕೈವಾಡವಿದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ; ಇಬ್ಬರು ಸಜೀವದಹನ

Related Articles

Back to top button