Film & Entertainment

*ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಕಾಪಿರೈಟ್ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ಚಿತ್ರಗಳ ಹಾಡನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ ಆರೋಪದಲ್ಲಿ ಕೇಸ್ ದಾಖಲಾಗಿದೆ.

ನ್ಯಾಯ ಎಲ್ಲಿದೆ? ಹಾಗೂ ಗಾಳಿಮಾತು ಚಿತ್ರಗಳ ಹಾಡುಗಳನ್ನು ತಮ್ಮ ಚಿತ್ರದಲ್ಲಿ ಬಳಕೆ ಮಾಡಿದ ಆರೋಪದಲ್ಲಿ ಎಂ.ಆರ್.ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ವಿರುದ್ಧ ದೂರು ನೀಡಿದ್ದಾರೆ. 2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಮಾತುಮತೆ ಸರಿ ಹೊಂದಿರಲಿಲ್ಲ. ಹಾಗಾಗಿ ಅನುಮತಿ ನೀಡಿರಲಿಲ್ಲ. ಆದರೆ 2024ರ ಮಾರ್ಚ್ ನಲ್ಲಿ ಬ್ಯಾಚುಲರ್ಸ್ ಪಾರ್ಟಿ ಎಂಬ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಸಿನಿಮಾದ ಎರಡು ಹಾಡುಗಳನ್ನು ಬಳಸಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೇ ಹಾಡು ಬಳಸಿದ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿರುದ್ಧ ನವೀನ್ ಪ್ರಕರಣ ದಾಖಲಿಸಿದ್ದಾರೆ.

Home add -Advt

Related Articles

Back to top button