Belagavi NewsBelgaum NewsKannada NewsKarnataka NewsNationalPolitics

*137 ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ಬಡಾವಣೆ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬೆಳಗಾವಿ ಬಳಿಯಲ್ಲಿ ಬಡಾವಣೆ ನಿರ್ಮಾಣಕ್ಕೆ 137 ಕೋಟಿ ರೂಪಾಯಿ ಅಂದಾಜು ವೆಚ್ಚಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. 

Home add -Advt

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಪುಟ ಸಭೆ ಮಾಡಲಾಗಿದೆ‌. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಅವರು, ವಾಣಿಜ್ಯ ಕೈಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ ನೀಡಲಾಗಿದೆ. ನಿಷ್ಕ್ರಿಯವಾಗಿದ್ದ 1304 ಎಕರೆ ಪ್ರದೇಶದಲ್ಲಿ ಗಣಿ ಗುತ್ತಿಗೆ ಚಟುವಟಿಕೆ ಮುಂದುವರಿಸಲು ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಹಮತಿಸಿದೆ. ಗಣಿ ಚಟುವಟಿಕೆಗಳ ಪ್ರಾರಂಭಕ್ಕೆ ಅನುಮತಿ ನೀಡಲು ಸಂಪುಟ ಗ್ರೀನ್ ಸಿಗ್ನಲ್ ಸೂಚಿಸಿದೆ.

ಟೇನಿಂಗ್ ಡಂಪ್ಸ್ ಬಳಸಿ ಗಣಿ ಚಟುವಟಿಕೆ ಮುಂದುವರಿಸಲು ಅವಕಾಶ ನೀಡಲಾಗಿದ್ದು, 2230 ಎಕರೆ ಭೂಮಿ ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ನೀಡಬೇಕು. 75.24 ಕೋಟಿ ರೂ. ಸರ್ಕಾರಕ್ಕೆ ಪಾವತಿ ಮಾಡುವುದು ಬಾಕಿ ಇದೆ. ಅದನ್ನೂ ಭರಿಸುವಂತೆ ಭಾರತ್ ಮೈನಿಂಗ್ಸ್‌ಗೆ ಸೂಚನೆ ನೀಡಲಾಗಿದೆ.

ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ 297.77 ಕೋಟಿ ರೂ. ಬಿಡುಗಡೆಗೆ ಕ್ಯಾಬಿನೆಟ್ ಅನುಮೋದಿಸಲಾಗಿದೆ. ಶಿಕ್ಷಣ ಇಲಾಖೆಯ ಎಲ್ಲ ಸರ್ಕಾರಿ ಶಾಲೆ ಹಾಗೂ ಪದವಿ ಕಾಲೇಜುಗಳಿಗೆ ಉಚಿತ ವಿದ್ಯುತ್‌ ಪೂರೈಕೆಗೆ ನಿರ್ಧಾರ ಮಾಡಲಾಗಿದ್ದು, 29.15 ಕೋಟಿ ರೂ. ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್‌ ಉಚಿತ ನೀರಿನ ಸೌಲಭ್ಯ ಒದಗಿಸಲಾಗುತ್ತಿದೆ.

ಕೋಟಿ ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್‌ ಉಚಿತ ನೀರಿನ ಸೌಲಭ್ಯ ಕ್ರೈಸ್ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ. ರೋಟರಿ ಸಂಸ್ಥೆಗೆ ಇದರ ಜವಾಬ್ದಾರಿ ನೀಡಲಾಗಿದೆ. 

ಸಭೆಯಲ್ಲಿ ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ ಸೇರಿದಂತೆ ಒಟ್ಟು 20 ವಿಷಯಗಳ ಮೇಲೆ ಚರ್ಚೆ ಮಾಡಿ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.  

Related Articles

Back to top button