Latest

ಬಿಜೆಪಿ ಸೇರಿದ ಕಟ್ಟಾ ದಳಪತಿ ಬಸವರಾಜ ಹೊರಟ್ಟಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ನಿಕಟಪೂರ್ವ ಸಭಾಪತಿ, ಮಾಜಿ ಸಚಿವ ಬಸವರಾಜ ಹೊರಟ್ಟಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊರಟ್ಟಿಗೆ ಬಿಜೆಪಿ ಶಾಲು ತೊಡಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಕೆಲವು ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಬಂದಾಗ ಅವರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆಯನ್ನು ಅಧಿಕೃತಗೊಳಿಸಿದ್ದ ಹೊರಟ್ಟಿ, ನಿನ್ನೆ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜಿನಾಮೆ ನೀಡಿ ಇಂದು ಬಿಜೆಪಿಗೆ ಸೇರ್ಪಡೆಯಾದರು.

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಗೋವಿಂದ ಕಾರಜೋಳ, ಅರಗ ಜ್ಞಾನೇಂದ್ರ, ಆರ್.ಅಶೋಕ ಮೊದಲಾದವರು ಇದ್ದರು.

ಮುಖ್ಯಮಂತ್ರಿ ಬೊಮ್ಮಾಯಿ ನಡೆಸಿದ ಹಿರಿಯ ಅಧಿಕಾರಿಗಳ ತುರ್ತು ಸಭೆಯಲ್ಲಿ ಸೂಚಿಸಿದ 18 ಅಂಶಗಳು

Related Articles

Back to top button