Belagavi NewsBelgaum News

*ಬೆಳಗಾವಿಯಲ್ಲಿ ಮತ್ತೊಂದು ಘೋರ ದುರಂತ: ಅಣ್ಣ-ತಮ್ಮ ಇಬ್ಬರೂ ಆತ್ಮಹತ್ಯೆಗೆ ಶರಣು* *ಕಾರಣ ಕೇಳಿದ್ರೆ ಶಾಕ್ ಆಗ್ತೀರಿ*

ಪ್ರಗತಿವಾಹಿನಿ ಸುದ್ದಿ: ಜೀವನದಲ್ಲಿ ಜಿಗುಪ್ಸೆಗೊಂಡು ಸಹೋದರರಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಅಣ್ಣ-ತಮ್ಮ ಇಬ್ಬರೂ ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Home add -Advt

ಸಂತೋಷ್ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಮೃತ ಸಹೋದರರು. ಮದುವೆಯಾಗಿಲ್ಲ ಎಂಬ ನೆಪದಲ್ಲಿ ಕುಡಿತದ ದಾಸರಾಗಿದ್ದ ಇಬ್ಬರೂ ಸಹೋದರರು. ಮದ್ಯದಲ್ಲಿ ವಿಷ ಬೆರೆಸಿ ಸೇವಿಸಿದ್ದಾರೆ. ಕೂಡಲೇ ನೆರೆಹೊರೆಯವರು ಮಹಾರಾಷ್ಟ್ರದ ಗಡಿಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.

ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button