Latest

ಮತ್ತೊಂದು ಭೀಕರ ರಸ್ತೆ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹಾಸನ: ಟಾಟಾ ಸುಮೋ ಹಾಗೂ ಕ್ವಾಲಿಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಜನರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಸಂಭವಿಸಿದೆ.

ಶಾಂತಿಗ್ರಾಮದ ಕೆಂಚಟ್ಟಹಳ್ಳಿ ಬಳಿ ರೋಡ್ ಹಂಪ್ ನಲ್ಲಿ ಟಾಟಾ ಸುಮೋಗೆ ಕ್ವಾಲೀಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕ್ವಾಲಿಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಟಾಟಾ ಸುಮೋ ಪಲ್ಟಿಯಾಗಿದ್ದು, 10 ಜನರು ಗಾಯಗೊಂಡಿದ್ದಾರೆ.

Home add -Advt

ಮೃತರನ್ನು ಪ್ರದೀಪ್ ಕುಮಾರ್, ಚಂದ್ರಶೇಖರ್, ನವೀನ್ ಕುಮಾರ್, ಸುನೀಲ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button