Kannada NewsKarnataka NewsLatest

*ಬಸ್ ಚಾಲಕನೊಂದಿಗೆ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ; ಖಾಸಗಿ ಶಾಲೆ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ರೈಲಿಗೆ ಸಿಲುಕಿ ಬಸ್ ಚಾಲಕ, ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲೆಯ ಬಸ್ ಡ್ರೈವರ್ ಜೊತೆ ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿತ್ತು.

Home add -Advt

ಕಳೆದ ಮೂರು ವರ್ಷಗಳಿಂದ ಖಾಸಗಿ ಶಾಲೆಯ ಬಸ್ ಡ್ರೈವರ್ ಆಗಿದ್ದ ಆರೋಪಿ, ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿ ಪೋಷಕರು ಶಾಲೆಯ ಆಡಳಿತ ಮಂಡಳಿಗೂ ದೂರು ನೀಡಿದ್ದರು. ಆದಾಗ್ಯೂ ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ನ್ಯೂ ಇಯರ್ ದಿನ ವಿದ್ಯಾರ್ಥಿನಿ ಸ್ನೇಹಿತರೊಂದಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಆದರೆ ಡಿಸೆಂಬರ್ 31ರ ರಾತ್ರಿ ವಿದ್ಯಾರ್ಥಿನಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಸ್ ಚಾಲಕ ಕೂಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರ ಮೃತದೇಹ ರುಂಡಮುಂಡ ಬೇರ್ಪಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಅರಸಿಕೆರೆ ರೈಲ್ವೆ ಪೊಲೀಸರು ಖಾಸಗಿ ಶಾಲೆ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದಾರೆ.


Related Articles

Back to top button