Kannada NewsLatest

ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿ ತೆರಳಿದ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡಕ್ಕೆ ಪಕ್ಷದ ಅಭ್ಯರ್ಥಿಪರ ಪ್ರಚಾರಕ್ಕೆ ಸ್ವತ: ಸಿಎಂ ಯಡಿಯೂರಪ್ಪ ಇಳಿದಿದ್ದಾರೆ. ಆದರೆ ಬಿಸಿಲ ಧಗೆಗೆ ತತ್ತರಿಸಿದ ಸಿಎಂ ರೋಡ್ ಶೋ ಅರ್ಧಕ್ಕೆ ನಿಲ್ಲಿಸಿದ್ದಾರೆ.

ಏಪ್ರಿಲ್ 17ರಂದು ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಪರ ಸಿಎಂ ಯಡಿಯೂರಪ್ಪ ರೋಡ್ ಶೋ ನಡೆಸಿ ಮತಯಾಚಿಸಿದ್ದಾರೆ. ಬಿಸಿಲ ಧಗೆಯಿಂದಾಗಿ ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿ ತಾವು ತಂಗಿದ್ದ ಹೋಟೆಲ್ ಗೆ ವಾಪಸ್ಸಾಗಿದ್ದಾರೆ.

Home add -Advt

ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿರುವ ಸಿಎಂ ಇಂದು ಕೊಂಚ ಸುಧಾರಿಸಿಕೊಂದಿದ್ದು, ಈ ನಡುವೆ ಚುನಾವಣಾ ಪ್ರಚಾರಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಬಿಸಿಲ ಝಳಕ್ಕೆ ಸಿಎಂ ಸುಸ್ತಾಗಿದ್ದು, ಆಯಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೋಡ್ ಶೋ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ನಾಳೆಯಿಂದ ವೀಕೆಂಡ್ ಕರ್ಫ್ಯೂ ಘೋಷಣೆ

Related Articles

Back to top button