Kannada NewsKarnataka NewsLatest
*ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲುತೂರಾಟ; ವ್ಯಕ್ತಿ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ನಡೆದಿದೆ.
ಸತ್ಯಮೂರ್ತಿ ಎಂಬಾತ ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರ ಟಿ.ಕೆ.ಬಡಾವಣೆಯಲ್ಲಿರುವ ನಿವಾಸಕ್ಕೆ ತೆರಳಿ ಕಲ್ಲು ತೂರಾಟ ನಡೆಸಿದ್ದಾನೆ. ಕಲ್ಲೆಸೆತದಿಂದಾಗಿ ಕಿಟಕಿಯ ಗಾಜುಗಳು ಒಡೆದಿವೆ.
ಘಟನೆ ಬೆನ್ನಲ್ಲೇ ಪೊಲೀಸರು ಆರೋಪಿ ಸತ್ಯಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿ ಸತ್ಯಮೂರ್ತಿ ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಎಂದು ಹೇಳಲಾಗುತ್ತಿದೆ.
ಅಲ್ಲದೇ ಆರೋಪಿ ಸತ್ಯಮೂರ್ತಿ ಚುನಾವಣೆ ಸಂದರ್ಭದಲ್ಲಿ ಇವಿಎಂ ಕೇಂದ್ರಕ್ಕೆ ನುಗ್ಗಿ ಇವಿಎಂ ಯಂತ್ರವನ್ನು ಒಡೆದು ಹಾಕಿದ್ದ. ಬಳಿಕ ಘಟನೆಯ ವಿಡಿಯೊವನ್ನು ತಾನೇ ವೈರಲ್ ಮಾಡಿದ್ದ ಎನ್ನಲಾಗಿದೆ.




