Latest

ಆಸ್ಪತ್ರೆಯಿಂದಲೇ ಸರ್ಕಾರದ ವಿರುದ್ಧ ಕಿಡಿ ಕಾರಿದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೊರೊನಾ ಸೋಂಕು ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Home add -Advt

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Related Articles

Back to top button