EducationKannada NewsKarnataka NewsLatest

*ತೀವ್ರಗೊಂಡ ಮಳೆ: ಶಾಲಾ ಕಾಲೇಜುಗಳಿಗೆ ಇಂದು ರಜೆ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆ ಮತ್ತೆ ತೀವ್ರಗೊಂಡಿದ್ದು, ಇಂದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್‌ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜುಲೈ 23ರಂದು ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೀರು ತುಂಬುವ ಜತೆಗೆ ಭೂಕುಸಿತ ಹಾಗೂ ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button