Karnataka News

*ಭಾರೀ ಮಳೆ ಎಚ್ಚರಿಕೆ: 5 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಲವೆಡೆ ಅವಾಂತರಗಳೂ ಸೃಷ್ಟಿಯಾಗಿವೆ. ಈ ನಡುವೆ ಜೂನ್ 13ವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಇಂದು ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಡಿನ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಸೇರಿದಂತೆ 5 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಗದಗ, ಬಾಗಲಕೋಟೆ ಸೇರಿದಂತೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ,, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

Related Articles

Back to top button