Latest

ಬೆಳಗಾವಿ ಅಧಿವೇಶನ ದಿನಾಂಕ ನಿಗದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.  ಶ್ರೀಗಂಧ ನೀತಿ-2022ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಸುಧಾಕರ್, ಶ್ರೀಗಂಧ ನೀತಿ-2022ಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ. ರೈತರು ತಮ್ಮ ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಕ್ತ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 19ರಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶ ಆರಂಭವಾಗಲಿದೆ.  ಡಿಸೆಂಬರ್ 19ರಿಂದ 29ರವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹೇಳಿದರು.

https://pragati.taskdun.com/gumbaz-stile-bus-standmp-pratap-simhas-a-ramadasreaction/

Related Articles

Back to top button