Kannada NewsKarnataka News

ಶಿವಮೊಗ್ಗ ಪಾಲಿಕೆ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್ ನೇಮಕ

ಪ್ರವತಿವಾಹಿನಿ ಸುದ್ದಿ: ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಡಾ. ಕವಿತಾ ಯೋಗಪ್ಪನವರ್ ಅವರನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕ ಮಾಡಲಾಗಿದೆ.‌

ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಡಾ. ಕವಿತಾ ಯೋಗಪ್ಪನವರ್ ಈ ಹಿಂದೆ ವಿಶೇಷ ಭೂಸ್ವಾಧೀನಾಧಿಕಾರಿ, ಡಾ.  ಶಿವರಾಮ ಕಾರಂತ ಬಡಾವಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.‌

Home add -Advt

ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ವರ್ಗಾಯಿಸಿ ಆದೇಶಿಸಿದೆ.

ಈ ಆದೇಶದಿಂದ ಸ್ಥಳ ನಿರೀಕ್ಷಣೆಗೆ ಬರುವ ಅಧಿಕಾರಿಯು ಮುಂದಿನ ಸ್ಥಳ ನಿಯುಕ್ತಿಗಾಗಿ ತಮ್ಮ ಮಾತ್ರ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Related Articles

Back to top button