Latest

ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದು ಪುನಾರಚನೆಯಾಗಲಿರುವ ಪ್ರಧಾನಿ ಮೋದಿ ಸಂಪುಟದಲ್ಲಿ ರಾಜ್ಯದ ಶೋಭಾ ಕರಂದ್ಲಾಜೆ ಸೇರಿದಂತೆ ನಾಲ್ವರು ಸಂಸದರಿಗೆ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ.

ಈಗಾಗಲೇ ಶೋಭಾ ಕರಂದ್ಲಾಜೆ ಹಾಗೂ ಸಂಸದ ಎ.ನಾರಾಯಣಸ್ವಾಮಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡುವುದು ಖಚಿತವಾಗಿದ್ದು, ಈ ನಡುವೆ ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಭಗವಂತ ಖೂಬಾ ಅವರಿಗೂ ಪ್ರಧಾನಿ ಕಾರ್ಯಾಲಯದಿಂದ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಭಗವಂತ ಖೂಬಾ ಅವರಿಗೂ ಸಂಪಟದಲ್ಲಿ ಅವಕಾಶ ನೀಡಲಾಗುತ್ತಿದೆ.

ಇನ್ನು ರಾಜ್ಯದ ಮತ್ತೋರ್ವ ಸಂಸದ ರಾಜೀವ್ ಚಂದ್ರಶೇಖರ್ ಹೆಸರು ಕೇಳಿಬರುತ್ತಿದ್ದು, ಪ್ರಧಾನಿ ಮೋದಿ ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಕೇಂದ್ರ ಸಂಪುಟಕ್ಕೆ ಡಿ.ವಿ.ಸದಾನಂದಗೌಡ ರಾಜೀನಾಮೆ

Related Articles

Back to top button