Kannada NewsNationalPolitics

*ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣ ವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಬಿಹಾರ ರಾಜ್ಯದ ಪ್ರಭಾವಿ ನಾಯಕ ಸಾಮ್ರಾಟ್‌ ಚೌಧರಿ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

ಇದರೊಂದಿಗೆ ಬಿಹಾರ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ  ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ರಾಜಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರು ಸಾಮ್ರಾಟ್ ಚೌಧರಿ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಕೇಂದ್ರದ ಹಿರಿಯ ನಾಯಕರು ಹಾಗೂ ಮೈತ್ರಿಕೂಟದ ಪ್ರಮುಖರು ಸಾಕ್ಷಿಯಾದರು. 

ದೀರ್ಘಕಾಲದ ರಾಜಕೀಯ ಬೆಳವಣಿಗೆಗಳ ನಂತರ ಬಿಹಾರದಲ್ಲಿ ಬಿಜೆಪಿ ತನ್ನದೇ ಆದ ನಾಯಕತ್ವದಲ್ಲಿ ಸರ್ಕಾರ ರಚಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ.

ಸಾಮ್ರಾಟ್ ಚೌಧರಿ ಅವರು ಬಿಹಾರದ ರಾಜಕೀಯದಲ್ಲಿ ಸುದೀರ್ಘ ಅನುಭವ ಹೊಂದಿರುವ ನಾಯಕರಾಗಿದ್ದಾರೆ. ಈ ಹಿಂದೆ ವಿವಿಧ ಖಾತೆಗಳ ಸಚಿವರಾಗಿ ಮತ್ತು ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿರುವ ಅವರು, ಈಗ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ.

ಹಿಂದುಳಿದ ವರ್ಗಗಳ ಪ್ರಬಲ ಧ್ವನಿಯಾಗಿ ಗುರುತಿಸಿಕೊಂಡಿರುವ ಚೌಧರಿ ಅವರ ಆಯ್ಕೆಯು ಮುಂಬರುವ ಚುನಾವಣೆಗಳ ದೃಷ್ಟಿಯಿಂದಲೂ ಅತ್ಯಂತ ಮಹತ್ವದ್ದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button