
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26ನೇ ಸಾಲಿನ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿವಿಧ ಶಾಲಾ/ಕಾಲೇಜು ಹಾಗೂ ಪದವಿ ವಿದ್ಯಾರ್ಥಿಗಳು ಜೂನ್. 1, 2025 ರಿಂದ ಸೇವಾ ಸಿಂಧು ಫೊರ್ಟಲ್ : https//sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿ ಪ್ರತಿಯೊಂದಿಗೆ, ಚಿಕ್ಕೋಡಿ ವಿಭಾಗದ ಪಾಸ್ ಕೌಂಟರಗಳಾದ ಚಿಕ್ಕೋಡಿ, ಸದಲಗಾ, ನಿಪ್ಪಾಣಿ, ಬೋರಗಾಂವ, ಸಂಕೇಶ್ವರ, ಹತ್ತರಗಿ, ರಾಯಭಾಗ, ಹಾರೂಗೇರಿ, ಗೋಕಾಕ, ಅಂಕಲಗಿ, ಮೂಡಲಗಿ, ಕುಲಗೋಡ, ಅಥಣಿ, ಕಾಗವಾಡ, ತೇಲಸಂಗ, ಹುಕ್ಕೇರಿ ಯಲ್ಲಿ ಪಾಸ್‌ಗಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 08338- 274418, 273050, 274129 ಗೆ ಸಂಪರ್ಕಿಸಬಹುದಾಗಿದೆ ಎಂದು ವಾ.ಕ.ರ.ಸಾ.ಸಂಸ್ಥೆ ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.