Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ವಿಚಾರಣೆಗೆ ಹಾಜರಾಗಿದ್ದ ವೇಳೆಯೇ ಕೋರ್ಟ್ ನಿಂದ ಎಸ್ಕೇಪ್ ಆದ ಆರೋಪಿ*

ಪ್ರಗತಿವಾಹಿನಿ ಸುದ್ದಿ: ಐದು ಪ್ರಕರಣಗಳಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ವಿಚಾರಣೆಗೆ ಹಾಜರಾಗಿದ್ದ ವೇಳೆಯೇ ಕೋರ್ಟ್ ಹಾಲ್ ನಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಬ್ದುಲ್ ಗನಿ ಶಬ್ಬೀರ್ ಶೇಕ್ ಪರಾರಿಯಾಗಿರುವ ಆರೋಪಿ. ಬೆಳಗಾವಿಯ ವಿವಿಧ ಠಾಣೆಗಾಲ್ಲಿ ಈತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಅಬ್ದುಲ್ ಗನಿಯನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು.

Home add -Advt

ಇಂದು ವಿಚಾರಣೆ ಇದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ಹಿಂಡಲಗಾ ಜೈಲಿನಿಂದ ಬೆಳಗಾವಿ ಜೀಂ ಎಫ್ ಸಿ ನ್ಯಾಯಾಲಯಕ್ಕೆ ಪೊಲೀಸರು ಕರೆತಂದಿದ್ದರು. ಪೊಲೀಸರ ಕಣ್ಣೆದುರೇ ಆರೋಪಿ ಅಬ್ದುಲ್ ಗನಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಇದೀಗ ಆರೋಪಿ ಅಬ್ದುಲ್ ಗನಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.


Related Articles

Back to top button