Latest

ಪತನಗೊಂಡಿದ್ದ ಹೆಲಿಕಾಪ್ಟರ್ ಬ್ಲ್ಯಾಕ್ ಬಾಕ್ಸ್ ಪತ್ತೆ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಜನರ ದುರ್ಮರಣಕ್ಕೆ ಕಾರಣವಾದ MI-17V5 ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಹೆಲಿಕಾಪ್ಟರ್ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.

ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 14 ಜನರು ವೆಲ್ಲಿಂಗ್ಟನ್ ಗೆ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ನಿನ್ನೆ ತಮಿಳುನಾಡಿದ ಕುನೂರು ಬಳಿ ಪತನಗೊಂಡು ದುರಂತಕ್ಕೀಡಾಗಿತ್ತು. 14 ಜನರ ಪೈಕಿ 13 ಜನರು ಸಾವನ್ನಪ್ಪಿದ್ದರು. ಪೈಲಟ್ ವರುಣ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೆಲಿಕಾಪ್ಟರ್ ದುರಂತ ಪ್ರಕರಣವನ್ನು ಇಂಡಿಯನ್ ಏರ್ ಫೋರ್ಸ್ ತನಿಖೆಗೆ ಆದೇಶಿಸಿದ್ದು, ಇದೀಗ ತನಿಖಾ ತಂಡಕ್ಕೆ ದುರಂತ ನಡೆದ ಸ್ಥಳದಲ್ಲಿ ಹೆಲಿಕಾಪ್ಟರ್ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಹೆಲಿಕಾಪ್ಟರ್ ಎಲೆಕ್ಟ್ರಿಕ್ ವ್ಯವಸ್ಥೆಗೆ ಕಳುಹಿಸುವ ಸಂದೇಶವನ್ನು ದಾಖಲಿಸಿಕೊಲ್ಳುವ ಉಪಕರಣ ಇದಾಗಿದ್ದು, ವಿಮಾನದಲ್ಲಿ ಎರಡು ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಒಂದು ವಿಮಾನ ಹಾರಾಟಕ್ಕೆ ಸಂಬಂಧಿಸಿದ್ದಾಗಿದ್ದರೆ, ಇನ್ನೊಂದು ಕಾಕ್ ಪಿಟ್ ಧ್ವನಿಮುದ್ರಣ ಸಾಧನ.

ಇದೀಗ ಹೆಲಿಕಾಪ್ಟರ್ ದುರಂತ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದ್ದು, ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಹೆಲಿಕಾಪ್ಟರ್ ಪತನಕ್ಕೆ ಕಾರಣವೇನೆಂಬುದನ್ನು ಬ್ಲ್ಯಾಕ್ ಬಾಕ್ಸ್ ತೆರೆದಿಡಲಿದೆ.
ಮಾಜಿ ಸಚಿವ ಎಸ್.ಆರ್.ಮೋರೆ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button