Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಹಾಸನದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದಿ 9 ಜನರು ಸಾವನ್ನಪ್ಪಿರುವ ಗಹ್ಟನೆ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿಯೂ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಬಲಿಯಾಗಿದ್ದಾರೆ.

ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಆಟೋದಲ್ಲಿದ್ದ ಡಿ.ಯೇಸು, ಜೆನಿಫರ್ ಮೃತ ದುರ್ದೈವಿಗಳು. ಅಪಘಾತದ ರಭಸಕ್ಕೆ ಆಟೋ ಇಬ್ಭಾಗವಾಗಿದೆ.

ಕ್ಯಾಂಟರ್ ಆಟೋಗೆ ಡಿಕ್ಕಿ ಹೊಡೆದು ಬಳಿಕ ಕಾರಿಗೆ ಗುದ್ದಿದೆ. ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದು, ಆಸಪತ್ರೆಗೆ ದಾಖಲಿಸಲಾಗಿದೆ. ಕ್ಯಾಂಟರ್ ಲಾರಿ ಬ್ರೇಕ್ ಫೇಲ್ ಆಗಿ ಈ ದುರಂತ ಸಂಭವಿಸಿದೆ.

Home add -Advt


Related Articles

Back to top button