Belagavi NewsBelgaum News

*ಹೆದ್ದಾರಿ ಮೇಲೆ ರಸ್ತೆ ಡಿವೈಡರಗೆ ಆಟೋ ಡಿಕ್ಕಿ: ಚಾಲಕ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಹಲಗಾ ಗ್ರಾಮದ ಬಳಿಯ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಆಟೋ ಡಿವೈಡರಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ.

Home add -Advt

ನ್ಯೂ ಗಾಂಧಿನಗರದ 45 ವರ್ಷದ ಮಹ್ಮದಲಿ ಶಬ್ಬಿರಹ್ಮದ ಭಾರಗೀರ ಮೃತ ದುರ್ದೈವಿ. ಧಾಮನೆ ಗ್ರಾಮದಲ್ಲಿರುವ ಅತ್ತೆ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಹಿರೇಬಾಗೇವಾಡಿ ಪಿಎಸ್ಐ ಅವಿನಾಶ ಯರಗೊಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಕೊಂಡಿದ್ದಾರೆ.

Related Articles

Back to top button