Karnataka NewsLatest

*ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಮಹಿಳೆಯರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಆಟೋ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ಸಂಭವಿಸಿದೆ.

ಆಟೋ ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಆಟೋದಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡೊದ್ದಾರೆ.

ಮೃತರ ಗುರುತು ಪತ್ತೆಯಾಗಿಲ್ಲ. ಗಾಯಾಳುಗಳನ್ನು ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button