*ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಮಹಿಳೆಯರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಆಟೋ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ಸಂಭವಿಸಿದೆ. ಆಟೋ ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಆಟೋದಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡೊದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಗಾಯಾಳುಗಳನ್ನು ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. *ಮದುವೆಯಾಗುವುದಾಗಿ ನಂಬಿಸಿ ಯುವಕರಿಂದ ಹಣ … Continue reading *ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಮಹಿಳೆಯರು ದುರ್ಮರಣ*