LatestNational

*ಅವಸಾನೇಶ್ವರ ಮಹಾದೇವ ದೇವಸ್ಥಾನದಲ್ಲಿ ದುರಂತ: ವಿದ್ಯುತ್ ತಂತಿ ಬಿದ್ದು ಇಬ್ಬರು ಸಾವು; ಕಾಲ್ತುಳಿತಕ್ಕೆ ಹಲವರು ಗಾಯ*

ಪ್ರಗತಿವಾಹಿನಿ ಸುದ್ದಿ: ಅವಸಾನೇಶ್ವರ ಮಹಾದೇವ ದೇವಸ್ಥಾನದ ಶೆಡ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ನೂಕು ನುಗ್ಗಲಿನಿಂದಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಇಂದು ಶ್ರಾವಣ ಸೋಮವಾರ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ವಿದ್ಯುತ್ ತಂತಿ ದೇವಸ್ಥಾನದ ಶೆಡ್ ಮೇಲೆ ಬಿದ್ದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾಲ್ತುಳಿತದಿಂದಾಗಿ ೨೭ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹತ್ತು ಜನರನ್ನು ತ್ರಿವೇದಿ ಗಂಜ್ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಶತಮಾನಗಷ್ಟು ಹಳೆಯದಾದ ದೇವಸ್ಥಾನಕ್ಕೆ ಪೂಜೆಗೆಂದು ಭಕ್ತರು ಬಂದಿದ್ದ ವೇಳೆಯೇ ಈ ದುರಂತ ಸಂಭವಿಸಿದೆ.

Home add -Advt

Related Articles

Back to top button