Kannada NewsKarnataka NewsLatest

ಹುಕ್ಕೇರಿ ಶ್ರೀಗಳಿಗೆ ಕಾಶಿ ಮಠದಿಂದ ಪ್ರಶಸ್ತಿ

ಪ್ರಗತಿವಾಹಿನಿ ಸುದ್ದಿ,  ಕಾಶಿ – 

ಶ್ರೀಮದ್ ಕಾಶಿ ಜ್ಞಾನ ಸಿಂಹಾಸನ ಜಗದ್ಗುರು ಮಹಾಪೀಠದಲ್ಲಿ ನಡೆದ ಸಮಾರಂಭದಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರಿಗೆ ಶ್ರೀ ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಶಿಷ್ಯ ಹೃತ್ಪದ್ಮಭಾಸ್ಕರಃ (ಭಕ್ತರ ಹೃದಯ ಕಮಲವನ್ನು ) ಅರಳಿಸುವ ಸೂರ್ಯ ಎಂಬ ಪ್ರಶಸ್ತಿ ಪ್ರಧಾನ ಮಾಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ, ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಉತ್ತರ ಕರ್ನಾಟಕದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ. ೬೫ ಸಾವಿರ ಮಕ್ಕಳಿಗೆ ಅಕ್ಷರ ದಾಸೋಹ ಮತ್ತು ಕೊರೊನಾ ಸಂದರ್ಭದಲ್ಲಿ ಭಕ್ತರಿಗೆ ಅನಕೂಲವಾಗುವ ದೃಷ್ಟಿಯಿಂದ ಆಹಾರದ ಕಿಟ್, ಆರೋಗ್ಯದ ಹಿತದೃಷ್ಟಿಯಿಂದ ಅಂಬುಲೆನ್ಸ್ ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡಿರುವ ಶ್ರೀಗಳು ಸಮಾಜಮುಖಿ ಸ್ವಾಮೀಜಿಯಾಗಿ ಬೆಳೆಯುತ್ತಿರುವುದು ಅಭಿಮಾನದ ಸಂಗತಿ. ಶ್ರೀಗಳಿಗೆ ಕಾಶಿ ಪೀಠದಿಂದ ಪ್ರಶಸ್ತಿ ಪ್ರಧಾನ ಮಾಡಿ ಆಶೀರ್ವದಿಸುತ್ತಿರುವುದು ನಮಗೆ ಸಂತಸ ತಂದಿದೆ ಎಂದರು.

ಕಾಶಿ ಪೀಠದ ನೂತನ ಜಗದ್ಗುರುಗಳಾಗಿ ಮೇ.೧೩ ರಂದು ಅಧಿಕಾರ ಸ್ವೀಕರಿಸಲಿರುವ ಕೊಟಗಿ ಮಠದ ಡಾ. ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಆಶೀರ್ವದಿಸಿದರು.

ವಿಆರ್ ಎಲ್ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಮಾತನಾಡಿ, ಹುಕ್ಕೇರಿ ಶ್ರೀಗಳು ಇನ್ನೂ ಹೆಚ್ಚಿನ ಕಾರ್ಯ ಮಾಡಲಿ, ಜಗದ್ಗುರುಗಳ ಅಪೇಕ್ಷೆಯಂತೆ ಉತ್ತರ ಕರ್ನಾಟಕದಲ್ಲಿ ಜನಪರ ಕಾರ್ಯ ಮಾಡುತ್ತಿದ್ದಾರೆ ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಜನರ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವ ಕೆಲಸ ಶ್ರೀಮಠಮಾಡಬೇಕು. ಆ ನಿಟ್ಟಿನಲ್ಲಿ ಮಾಡುತ್ತಿದ್ದೇವೆ. ಜಗದ್ಗುರುಗಳ ಆಶೀರ್ವಾದ ಸದಾ ಇರಲಿ ಎಂದರು.

ಬೆಂಗಳೂರು ವಿಭೂತಿ ಮಠದ ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಬೇಬಿ ಮಠದ ಡಾ. ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಹಗರಿಬೊಮ್ಮನಹಳ್ಳಿಯ ಹಾಲಸ್ವಾಮಿಮಠದ ಡಾ. ಅವಿನವ ಹಾಲಸಿದ್ದೇಶ್ವರ ಸ್ವಾಮೀಜಿ, ಕಾಶಿಯ ವಿಧಾನ ಪರಿಷತ್ ಸದಸ್ಯರು, ಸಂಸದರು ಉಪಸ್ಥಿತರಿದ್ದರು.

ದೇವಲತ್ತಿ ಗ್ರಾಮದೇವತೆ ಜಾತ್ರೆಗೆ ವಿದ್ಯುಕ್ತ ಚಾಲನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button