*ಬೆಳಗಾವಿ ಪೊಲೀಸರಿಂದ ಹೆಲ್ಮೆಟ್ ಕುರಿತು ಜಾಗೃತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸಲು ನಗರ ಪೊಲೀಸರಿಗೆ ಹೆಲ್ಮೆಟ್ ವಿತರಿಸುವ ಮೂಲಕ ಬೈಕ್ ರ್ಯಾಲಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು
ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದರ ಮೂಲಕ ಅಪಘಾತದ ವೇಳೆ ತಮಗೆ ಹಾಗೂ ತಮ್ಮ ಕುಟುಂಬಸ್ಥರಿಗೆ ಎದುರಾಗುವ ಸಂಕಷ್ಟದಿಂದ ಸುರಕ್ಷಿತವಾಗಿರಬಹುದೆಂಬ ಸಂದೇಶವನ್ನು ನೀಡಿದರು.
ಜಾಗೃತಿ ರ್ಯಾಲಿಯೂ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡು, ಕೊಲ್ಲಾಪುರ ಕೃಷ್ಣದೇವರಾಯ ಸರ್ಕಲ್, ರಾಣಿ ಚೆನಮ್ಮ ವೃತ್ತ, ಕೋರ್ಟ್ ರಸ್ತೆ ಮಾರ್ಗವಾಗಿ, ಆರ್.ಟಿ.ಓ ಸಂಗೋಳ್ಳಿ ರಾಯಣ್ಣ ವೃತ್ತಕ್ಕೆ ತಲುಪಿ ಕೊನೆಗೊಂಡಿತು.
ಕಾರ್ಯಕ್ರಮದಲ್ಲಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹ್ಮದ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯಕಾರಿ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ನಗರ ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬಾನಿಯಾಂಗ್, ಪೊಲೀಸ್ ವರಿಷ್ಠ ಡಾ.ಭೀಮಾಶಂಕರ ಗುಳೇದ, ಇನ್ನುಳಿದ ಗಣ್ಯರು ಪೊಲೀಸ್ ಸಿಬ್ಬಂದಿಗಳಿಗೆ ಹೆಲ್ಮಟ್ ವಿತರಿಸಿದರು. ಈ ವೇಳೆ ಡಿಸಿಪಿ ರೋಹನ್ ಜಗದೀಶ್ ಅವರು ಹೆಲ್ಮೆಟ್ ಹಾಕಿಕೊಳ್ಳುವ ಮೂಲಕ ಬೈಕ್ ರ್ಯಾಲಿಯಲ್ಲಿ ಭಾಗಿಯಾದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ