*ಹೃದಯಾಘಾತ ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹೃದಯಾಘಾತ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಲು ಮತ್ತು ಜೀವ ಉಳಿಸುವ ತಂತ್ರಗಳ ಬಗ್ಗೆ ತರಬೇತಿ ನೀಡುವ ಕಾರ್ಯಕ್ರಮ ಭಾನುವಾರ ಬೆಳಗಾವಿಯಲ್ಲಿ ನಡೆಯಲಿದೆ.
ಲಯನ್ಸ್ ಕ್ಲಬ್ ಆಫ್ ಜೋನ್ 2 (ಜಿಲ್ಲೆ 317 ಬಿ), ಲಘು ಉದ್ಯೋಗ ಭಾರತಿ ಮಹಿಳಾ ಘಟಕ ಮತ್ತು ಕೆವಿಐಸಿ ಖಾನಾಪುರ ಸಹಯೋಗದಲ್ಲಿ
ನವೆಂಬರ್ 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ಟಿಳಕವಾಡಿಯ ಲಯನ್ಸ್ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಹೃದಯಾಘಾತ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜೀವ ಉಳಿಸುವ ತಂತ್ರಗಳಲ್ಲಿ ಭಾಗವಹಿಸುವವರಿಗೆ ತರಬೇತಿ ನೀಡುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ.
ಹಠಾತ್ ಹೃದಯಾಘಾತಗಳು ಸಾಮಾನ್ಯವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎನ್ನುವುದನ್ನು ತಿಳಿದುಕೊಂಡರೆ ಜೀವಗಳನ್ನು ಉಳಿಸಬಹುದು. ಹಾಗಾಗಿ, ಅಮೂಲ್ಯವಾದ ಜೀವಗಳನ್ನು ಉಳಿಸಲು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಪ್ರಕಟಣೆಯಲ್ಲಿ ಕೋರಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ