ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜನತೆಯ ಧ್ವನಿಯಾಗಿರುವ ಪ್ರಧಾನಿ ಮೋದಿಜಿಯವರು ಹತ್ತುಹಲವಾರು ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವು ಫಲಾನುಭವಿಗಳಿಗೆ ಮುಟ್ಟುವಲ್ಲಿಯೂ ಯಶಸ್ವಿಯಾಗಿವೆ. ಅಂತಹ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಜನಸಾಮಾನ್ಯರ ಬದುಕಿಗೆ ಬೆಳಕಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ತಿಳಿಸಿದರು.
ಕೆಎಲ್‌ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಭಾರತ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನಾ ಮಿಷನ್‌ದ ವಸತಿ ಹಾಗೂ ನಗರ ವ್ಯವಹಾರಗಳು ಸಚಿವಾಲಯ, ಬೆಳಗಾವಿ ಜಿಲ್ಲಾಡಳಿತ, ನಗರ ಪಾಲಿಕೆ ಮತ್ತು ಲಿಂಗರಾಜ ಕಾಲೇಜು ಸಂಯುಕ್ತಾಶ್ರಯದಲ್ಲಿ ಜರುಗಿದ ‘ಆವಾಸ್ ಪರ್ ಸಂವಾದ’ ಒಂದು ದಿನದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.
ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದು ಎಷ್ಟು ಮುಖ್ಯವೋ ಅದನ್ನು ಕಾರ್ಯಗತಗೊಳಿಸುವುದು ಅಷ್ಟೇ ಮುಖ್ಯ. ಮೋದಿಜಿ ಸರ್ಕಾರವು ದೇಶದ ಜನತೆಗೆ ಮುಟ್ಟಿಸುವ ಕೆಲಸ ಮಾಡಿದೆ. ಆವಾಸ್ ಯೋಜನೆಯು ಲಕ್ಷಾಂತರ ಗ್ರಾಮೀಣ ಹಾಗೂ ನಗರ ಪ್ರದೇಶದ ಜನತೆಯು ಇದರ ಲಾಭವನ್ನು ಪಡೆದುಕೊಂಡಿದ್ದಾರೆ. 2022ರಲ್ಲಿ ದೇಶದ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕೆAಬುದು ಸರ್ಕಾರದ ಉದ್ದೇಶವಾಗಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ. ಕೇಂದ್ರದ ಸಹಾಯದೊಂದಿಗೆ ನಗರ ಸ್ಥಳೀಯ ಸಂಸ್ಥೆಗಳು, ಬ್ಯಾಂಕ್‌ಗಳ ಸಹಯೋಗದಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಇದರ ಲಾಭವನ್ನು ಪಡೆಯುವ ಮೂಲಕ ಈ ಯೋಜನೆಯನ್ನು ಯಶಸ್ಸುಗೊಳಿಸಬೇಕಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಅವರು ಮಾತನಾಡುತ್ತ, ದೇಶದ ಕೊನೆಯ ವ್ಯಕ್ತಿಗೂ ಸರಕಾರದ ಯೋಜನೆಗಳು ಮುಟ್ಟಬೇಕೆಂಬ ಉದ್ದೇಶದಿಂದ ಹಲವು ಯೋಜನೆಗಳು ಜಾರಿಯಲ್ಲಿವೆ. ಸರ್ಕಾರದ ಮಹದ್ದುದ್ದೇಶಗಳಲ್ಲಿ ಒಂದಾಗಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಯಶಸ್ಸುಗೊಂಡಿದೆ. ಈ ಯೋಜನೆಯಿಂದ ಇನ್ನೂ ಅಗತ್ಯವಾಗಿ ಬೇಕಾಗಿರುವ ಫಲಗಳನ್ನು, ಸಾಧಕ ಕೊರತೆಗಳನ್ನು ಕುರಿತು ಸಂವಾದವನ್ನು ಏರ್ಪಡಿಸಿರುವುದು ಬಹುಮುಖ್ಯವಾಗಿದೆ. ಇದರ ಲಾಭ ಪಡೆದ ಫಲಾನುಭವಿಗಳೊಂದಿಗೆ ಈ ಕಾರ್ಯಗಾರ ನಡೆಯುತ್ತಿರುವುದು ಅರ್ಥಪೂರ್ಣವೆನಿಸಿದೆ ಎಂದರು.
ಗೌರವ ಅತಿಥಿಗಳಾಗಿ ಆಗಮಿಸಿದ್ದ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ಜಿ.ಹಿರೇಮಠ ಅವರು ಮಾತನಾಡಿ, ಸರ್ಕಾರ ಈ ಯೋಜನೆಯನ್ನು ಅತ್ಯಂತ ಮುತುವರ್ಜಿ ವಹಿಸಿಕೊಂಡು ಜಿಲ್ಲೆಯಲ್ಲಿ ಕಾರ್ಯಗತಗೊಳಿಸಲಾಗಿದೆ. ಸಾವಿರಾರು ಜನರು ಇದರ ಲಾಭವನ್ನು ಪಡೆದುಕೊಂಡಿದ್ದಾರೆ. ಇನ್ನೂ ಒಂದಷ್ಟು ವಸತಿಗಳನ್ನು ನಿರ್ಮಿಸಲಾಗುತ್ತಿದೆ. ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯು ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ ಎಂದು ಯೋಜನೆಯ ಕುರಿತು ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಗಾಳಿ ಹಾಗೂ ಪ್ರೊಜೆಕ್ಟ್ ನಿರ್ದೇಶಕರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ಯೋಜನೆಯ ರೂಪರೇಷೆಗಳ ಬಗ್ಗೆ ಹಾಗೂ ಅದರ ಪ್ರಗತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಕಾಲೇಜಿನ ಪ್ರಾಚಾರ್ಯರಾದ ಡಾ.ಬಿ.ಎಂ.ತೇಜಸ್ವಿಯವರು ಸಭಿಕರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಮಾರಿ ಬಸಮ್ಮ ಮಠದ ಪ್ರಾರ್ಥಿಸಿದರು. ಡಾ.ಎಚ್.ಎಂ. ಚನ್ನಪ್ಪಗೋಳ ವಂದಿಸಿದರು. ಡಾ.ಮಹೇಶ ಸಿ.ಗುರನಗೌಡರ ನಿರೂಪಿಸಿದರು. ಕೆಎಲ್‌ಇ ಸಂಸ್ಥೆಯ ಆಜೀವ ಸದಸ್ಯರಾದ ಡಾ.ಪ್ರಕಾಶ ಕಟಕೋಳ, ಡಾ.ಎಂ.ಪಿ.ಸತೀಶ, ಪ್ರೊ.ಶೀತಲ ನಂಜಪ್ಪನವರ ಹಾಗೂ ಫಲಾನುಭವಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಹಾದಾನಿ ಲಿಂಗರಾಜರ ಹೆಸರು ಇತಿಹಾಸದಲ್ಲಿ ಅಮರ: ಡಾ.ಪ್ರಭಾಕರ ಕೋರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ