Cancer Hospital 2
Beereshwara 36
LaxmiTai 5

*ಮಾಧ್ಯಮ ಅಕಾಡೆಮಿಗೆ ಆಯೇಷಾ ಖಾನಂ ಅಧ್ಯಕ್ಷೆಯಾಗಿ ನೇಮಕ* 

Anvekar 3

ಪ್ರಗತಿವಾಹಿನಿ ಸುದ್ದಿ : ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.

ಈವರೆಗೆ ಯಾವ ಸರ್ಕಾರವೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆರನ್ನು ಅಧ್ಯಕ್ಷರನ್ನಾಗಿ ನೇಮಿಸಿರಲಿಲ್ಲ ಎಂಬುವುದು ಗಮನಾರ್ಹ. ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿದ್ದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎಂಬ ಅಭಿಪ್ರಾಯವನ್ನು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಆಯೇಷಾ ಅವರ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಭಾಕರ್ ಅವರ ಅಭಿಪ್ರಾಯಕ್ಕೆ ಮನ್ನಣೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಆಯೇಷಾ ಅವರ ಹೆಸರನ್ನು ಅಂತಿಮಗೊಳಿಸಿ ಆದೇಶಿಸಲು ಸೂಚನೆ ನೀಡಿದ್ದಾರೆ.

Emergency Service

ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ.

ಇನ್ನು ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿದ್ದ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದೆ.

Bottom Add3
Bottom Ad 2