ಪ್ರಗತಿವಾಹಿನಿ ಸುದ್ದಿ; ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತಹ ಸುದ್ದಿಯಿದು. ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ ಪಿಎಫ್ ಐ ಸಂಘಟನೆ ಸಂಚು ರೂಪಿಸಿತ್ತು ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.
ರಾಮಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಪಿಎಫ್ ಐ ಸಂಘಟನೆಯ ನಾಲ್ವರು ಕಾರ್ಯಕರ್ತರನ್ನು ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ಮಹಾರಾಷ್ಟ್ರದಲ್ಲಿ ಬಂಧಿಸಿದ್ದಾರೆ.
ಐವರು ಬಂಧಿತರನ್ನು ತೀವ್ರ ವಿಚಾರಣೆಗೊಳಪಡಿಸಿದ ಅಧಿಕಾರಿಗಳಿಗೆ ಆತಂಕಕಾರಿ ಮಾಹಿತಿ ಗೊತ್ತಾಗಿದೆ. ಪಿಎಫ್ ಐ ಕಾರ್ಯಕರ್ತರು ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಅಲ್ಲದೇ ರಾಮಮಂದಿರ ಜಾಗದಲ್ಲಿ ಬಾಬ್ರಿ ಮಸೀದಿ ನಿರ್ಮಾಣಕ್ಕೂ ಯೋಜನೆ ರೂಪಿಸಿದ್ದಾಗಿ ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತ ನಾಲ್ವರನ್ನು ಎನ್ ಐಎ ಅಧಿಕಾರಿಗಳು ನಾಸಿಕ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ ಪಿಎಫ್ ಐ ಸಂಚು ವಿಚಾರವಾಗಿ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಜಲಾವೃತ; ಬೆಂಗಳೂರು-ಪುಣೆ ಮಾರ್ಗ ಸ್ಥಗಿತ
https://pragati.taskdun.com/latest/national-highway-48bandhwater-flowtumakuru/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ