ಮಹರ್ಷಿ ವಾಲ್ಮೀಕಿ ಏರ್ ಪೋರ್ಟ್ ಗೂ ಚಾಲನೆ
ಪ್ರಗತಿವಾಹಿನಿ ಸುದ್ದಿ; ಅಯೋಧ್ಯೆ: ರಾಮಜನ್ಮಭೂಮಿ ಅಧೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದ್ದು, ಇಂದಿನಿಂದ ರಾಮನೂರಿನಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಯಲ್ಲಿ ಅಭಿವೃದ್ಧಿ ಮಂತ್ರ ಪಠಿಸಿದ್ದಾರೆ.
ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾನ ನಡೆಯಲಿದ್ದು, ಅದಕ್ಕೂ ಮುನ್ನ ಇಂದು ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯಾ ಧಾಮ್ ರೈಲು ನಿಲ್ದಾಣ ಉದ್ಘಾಟಿಸಿದರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಾಥ್ ನೀಡಿದರು.
ಅತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅಯೋಧ್ಯಾ ಧಾಮ್ ರೈಲು ನಿಲ್ದಾಣ 240 ಕೋಟಿ ವೆಚ್ಚದಲ್ಲಿ ಮರು ಅಭಿವೃದ್ಧಿ ಹೊಂದಿದೆ. ಮೂರು ಅಂತಸ್ತು, ಲಿಫ್ಟ್ ಗಳು ಎಸ್ಕಿಲೇಟರ್ , ಲಗೇಜ್ ರ್ಯಾಕ್, ಸಿಸಿಟಿ, ಪ್ರಯಾಣಿಕರ ವಿಶ್ರಾಂತಿ ಕೊಠಡಿ, ವೇಟಿಂಗ್ ಹಾಲ್, ಫುಡ್ ಪ್ಲಾಜಾ ಸೇರಿದಂತೆ ಹಲವು ವ್ಯವಸ್ಥೆಗಳಿವೆ.
ರೈಲ್ವೆ ನಿಲ್ದಾಣ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ರೈಲ್ವೆ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದರು.
ಬಳಿಕ ಅಯೋಧ್ಯೆಯಲ್ಲಿ ಮಂದಿರ ಮಾದರಿಯ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ ಉದ್ಘಾಟಿಸಿದರು. ನಂತರದಲ್ಲಿ ರಾಮಜನ್ಮಭೂಮಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ರಾಮಪಥ, ಭಕ್ತಿಪಥ, ಧರ್ಮಪಥಗಳನ್ನು ಉದ್ಘಾಟಿಸಿದ್ದಾರೆ.
ಅಯೋಧ್ಯೆಯಲ್ಲಿ ಒಟ್ಟು 15 ಸಾವಿರ ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ