Latest

ರಾಮಮಂದಿರ ಪ್ರಧಾನ ಅರ್ಚಕರಿಗೂ ಕೊವಿಡ್ ಪಾಸಿಟೀವ್

ಪ್ರಗತಿವಾಹಿನಿ ಸುದ್ದಿ; ಲಕ್ನೌ: ಅಯೋಧ್ಯೆ ರಾಮ ಮಂದಿರ ಪ್ರಧಾನ ಅರ್ಚಕರು ಸೇರಿದಂತೆ ದೇವಾಲಯದ 16 ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಶಿಷ್ಯ ಪ್ರದೀಪ್ ದಾಸ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸದ್ಯ ಅವರನ್ನು ಹೋಂ ಐಸೋಲೇಷನ್‍ಗೆ ಒಳಪಡಿಸಲಾಗಿದೆ.

Home add -Advt

ರಾಮಂದಿರದ ಉಸ್ತುವಾರಿ ವಹಿಸಿಕೊಂಡಿದ್ದ ನಾಲ್ಕು ಅರ್ಚಕರಲ್ಲಿ ದಾಸ್ ಪ್ರಮುಖರಾಗಿದ್ದಾರೆ. ದೇವಾಲಯದಲ್ಲಿ ಕರ್ತವ್ಯದಲ್ಲಿದ್ದ 16 ಮಂದಿ ಭದ್ರತಾ ಸಿಬ್ಬಂದಿಗೆ ಕೂಡ ಕೋವಿಡ್ ಪಾಸಿಟೀವ್ ಬಂದಿದೆ.

ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಶಿಲಾನ್ಯಾಸ ನೆರವೇರಲಿದ್ದು, ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ನಡುವೆ ಅಯೋಧ್ಯೆಯ ಅರ್ಚಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

Related Articles

Back to top button