ಪ್ರಗತಿವಾಹಿನಿ ಸುದ್ದಿ: ನಾಳೆ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮವಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಕಟೆಚ್ಚರ ವಹಿಸಲಾಗಿದೆ.
ರಾಜ್ಯದ ಆಯಾ ಜಿಲ್ಲೆಗಳಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಕಾನೂನು ವಿರೋಧಿ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ರಾಜಧಾನಿ ಬೆಂಗಳೂರಿನಾದ್ಯಂತ ಪೊಲೀಸರು ಕಟೆಚ್ಚರ ವಹಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಕಣ್ಗಾವಲು ಹಾಕಲಾಗಿದೆ.
ಪೊಲೀಸರು ಧಾರ್ಮಿಕ ಮುಖಂಡರ ಸಭೆ ನಡೆಸಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಬೆಂಗಳುರು, ಮೈಸೂರು, ಮಂಗಳೂರು, ಚಿಕ್ಕಮಗಳೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
196 ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳ ಗುರುತಿಸಿ ನಿಗಾ ವಹಿಸಲಾಗಿದೆ. ರಾತ್ರಿ ಗಸ್ತು ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ