*ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾದ ಅಮಿತ್ ಶಾ, ಎಲ್ .ಕೆ.ಅಡ್ವಾಣಿ; ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ಉದ್ಘಾಟನೆಯಾಗಿದ್ದು, ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಕೆಲವೇ ಕ್ಷಣಗಳಲ್ಲಿ ನೆರವೇರಲಿದೆ. ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬಿಜೆಪಿಯ ಕೆಲ ಹಿರಿಯ ನಾಯಕರೇ ಗೈರಾಗಿದ್ದಾರೆ.
ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿಲ್ಲ ಎಂದು ತಿಳಿದುಬಂದಿದೆ. ಅಮಿತ್ ಶಾ ಕುಟುಂಬ ಸಮೇತರಾಗಿ ಬಿರ್ಲಾ ಮಂದಿರಕ್ಕೆ ತೆರಳಿದ್ದು, ಅಲ್ಲಿಂದಲೇ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ನೇರಪ್ರಸಾದಲ್ಲಿ ವೀಕ್ಷಿಸಲಿದ್ದಾರೆ.
ಇನ್ನು ಬಿಜೆಪಿ ಹಿರಿಯ ನಾಯಕ, ರಾಮ ಜನ್ಮಭೂಮಿ ಹೋರಾತದಲ್ಲಿ ಮುಂಚೂಣಿಯಲ್ಲಿದ್ದ ಎಲ್.ಕೆ.ಅಡ್ವಾಣಿ ಕೂಡ ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
96 ವರ್ಷದ ಎಲ್.ಕೆ.ಅಡ್ವಾಣಿ ಆರೋಗ್ಯ ಸಮಸ್ಯೆ ಕಾರಣಕ್ಕೆ ಹಾಗೂ ಶೀತ ವಾತಾವರಣವಿರುವ ಇನ್ನೆಲೆಯಲ್ಲಿ ಈ ಕಾರ್ಯಕ್ರಕ್ಕೆ ಆಗಮಿಸುತ್ತಿಲ್ಲ. ಇನ್ನು ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಕೂಡ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ಅಡ್ವಾಣಿ ಹಾಗೂ ಜೋಶಿ ಅವರಿಗೆ ವಯಸ್ಸು ಹಾಗೂ ಆರೋಗ್ಯದ ಸ್ಥಿತಿ ಅರಿತು ಕಾರ್ಯಕ್ರಮಕ್ಕೆ ಹಾಜರಾಗದಂತೆ ವಿನಂತಿಸಲಾಗಿದೆ ಎಂದು ರಾಮ ಜನ್ಮ ಭೂಮಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ