*ಜೈ ಶ್ರೀರಾಮ್… ಕೋಟ್ಯಂತರ ಭಾರತೀಯರ ಶತಮಾನಗಳ ಕನಸು ನನಸು; ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಂಪನ್ನ*
ಪ್ರಗತಿವಾಹಿನಿ ಸುದ್ದಿ: ಕೋಟ್ಯಂತರ ರಾಮ ಭಕ್ತರು ಕೋಟಿ ಕೋಟಿ ಭಾರತಿಯರು ಶತ ಶತ ಮಾನಗಳಿಂದ ಕಾಯುತ್ತಿದ್ದ ಆ ಕ್ಷ ಸಪನ್ನವಾಗಿದೆ. ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಸಪನ್ನವಾಗಿದೆ.
ಮಧ್ಯಾಹ್ನ 12:29ರಿಂದ 12:30ರ ಅಭಿಜಿತ್ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ, ಬಾಲರಾಮನ ಮೂರ್ತಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ. ಕಾಶಿಯ ಹೆಸರಾಂತ ವೈದಿಕ ಆಚಾರ್ಯ ಗಣೇಶ್ವರ್ ದ್ರಾವಿಡ್ ಹಾಗೂ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಪೂಜಾ ಕೈಂಕರ್ಯಗಳು ನಡೆದಿದ್ದು, ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು.
121 ವೈದಿಕ ಆಚಾರ್ಯರಿಂದ ಧಾರ್ಮಿಕ ಕ್ರಿಯೆ, 150ಕ್ಕೂ ಹೆಚ್ಚು ಸಂಪ್ರದಾಯಗಳು ನಡೆದವು. ಗಣ್ಯಾತಿ ಗಣ್ಯರು, ಸೆಲೆಬ್ರೆಟಿಗಳು, ಕೋಟಿ ಕೋಟಿ ರಾಮ ಭಕ್ತರು, ಭಾರತೀಯರು ಈ ಐತಿಹಾಸಿಕ ಪುಣ್ಯ ಕ್ಷಣವನ್ನು ಕನ್ತುಂಬಿಕೊಂಡು ಪಾವನರಾದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ