Karnataka News

*ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಹಿ ಸುದ್ದಿ ನೀಡಿದೆ. ಶಬರಿಮಲೆಗೆ ಇದೇ ಮೊದಲ ಬಾರಿಗೆ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ವ್ಯವಸ್ಥೆ ಮಾಡಲಾಗಿದೆ.

ನವೆಂಬರ್ 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ಕೆ.ಎಸ್.ಆರ್.ಟಿ.ಸಿ. ವೋಲ್ವೋ ಬಸ್ ಸಂಚರಿಸಲಿದೆ. ಶಬರಿಮಲೆಗೆ ಅಯ್ಯಪ್ಪ ಭಕ್ತರು ತೆರಳುತ್ತಿರುವ ಹಿನ್ನೆಲೆಯಲ್ಲಿ ಮಾಲಾಧಾರಿಗಳ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿಯಿಂದ ಈ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಕೇರಳದ ಶಬರಿಮಲೆ ನೀಲಕ್ಕಲ್ ಗೆ 1750 ರೂ ಟಿಕೆಟ್ ದರವನ್ನು ಕೆ.ಎಸ್.ಆರ್.ಟಿ.ಸಿ ನಿಗದಿ ಮಾಡಿದೆ. ಬೆಂಗಳೂರಿನ ಶಾಂತಿನಗರದಿಂದ ಶಬರಿಮಲೆಯ ಬೇಸ್ ಕ್ಯಾಂಪ್ ನೀಲಕ್ಕಲ್ ವರೆಗೆ ಹಾಗೂ ನೀಲಕ್ಕಲ್ ನಿಂದ ಶಾಂತಿನಗರಕ್ಕೆ ಬಸ್ ಸಂಚರಿಸಲಿದೆ.

Related Articles

Back to top button