ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಜಾನ್ ಮೈಕ್ ತೆರವಿಗೆ ಆಗ್ರಹಿಸಿ ಇಂದಿನಿಂದ ರಾಜ್ಯದ ದೇವಾಲಯಗಳಲ್ಲಿ ಆರಂಭವಾಗಿರುವ ಸುಪ್ರಭಾತ ಅಭಿಯಾನ, ಮಂತ್ರಪಠಣ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಮತ್ತೊಂದು ಧಾರ್ಮಿಕ ಸಂಘರ್ಷ ಆರಂಭವಾಗಿದ್ದು, ಆಜಾನ್ V/S ಸುಪ್ರಭಾತ ವಿವಾದಕ್ಕೆ ಕಾರಣವಾಗುತ್ತಿದೆ. ಆಜಾನ್ ವಿರುದ್ಧ ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಉಗ್ರರು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಕೆಲ ಸಂಘಟನೆಗಳು ರಾಜ್ಯದಲ್ಲಿ ಸಂಘರ್ಷಗಳನ್ನು ಸೃಷ್ಟಿ ಮಾಡುತ್ತಿವೆ. ಆಜಾನ್ ವಿರುದ್ಧ ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು. ಇಂತವರನ್ನು ಯುಎಪಿಎ(ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಆಕ್ಟ್ ಅಡಿಯಲ್ಲಿ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಇಂತಹ ಸಂಘಟನೆಗಳಿಗೆ ಮೌನವಾಗಿ ಪ್ರೋತ್ಸಾಹ ನೀಡುತ್ತಿರುವುದು ಸರಿಯಲ್ಲ. ಶಬ್ದ ಮಾಲಿನ್ಯವಾದರೆ ಕೋರ್ಟ್ ನೀಡಿರುವ ಆದೇಶದ ಪ್ರಕಾರ ಕ್ರಮ ಕೈಗೊಳ್ಳಬೇಕು ಅದನ್ನು ಬಿಟ್ಟು ಈ ರೀತಿ ಅಭಿಯಾನದ ಹೆಸರಲ್ಲಿ ಅಶಾಂತಿ ಸೃಷ್ಟಿಸುವುದು ಭಯೋತ್ಪಾದನೆ ಎಂದು ಹೇಳಿದ್ದಾರೆ.
ಬಿಜೆಪಿ ಮುಖಂಡನಿಂದ ವಂಚನೆ; ಉದ್ಯಮಿ ಆತ್ಮಹತ್ಯೆಗೆ ಶರಣು
ವಿಶೇಷ ಚೇತನ ಮಗುವಿಗೆ ವಿಮಾನ ಏರಲು ಬಿಡದ ಇಂಡಿಗೋ ಸಿಬ್ಬಂದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ