Latest

*ಪ್ರತಿಭಟನೆ ವೇಳೆ ವಿದ್ಯಾರ್ಥಿ ದುರ್ಮರಣ; ವಿಶ್ವ ವಿದ್ಯಾಲಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಜಿಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ವಿದ್ಯಾರ್ಥಿ ಅಭಿಷೇಕ್ (22) ಮೃತ ಪಟ್ಟಿದ್ದು, ವಿದ್ಯಾರ್ಥಿ ಸಾವಿಗೆ ವಿಶ್ವ ವಿದ್ಯಾಲಯದ ನಿರ್ಲಕ್ಷವೇ ಕಾರಣ ಎಂದು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಅಜಿಂ ಪ್ರೇಮ್ ಜಿ ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ಕಳೆದ 12 ದಿನಗಳಿಂದ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ವಿವಿ ಆಡಳಿತ ಮಂಡಳಿ ಸ್ಪಂದಿಸದ ಕಾರಣ ವಿದ್ಯಾರ್ಥಿಗಳು ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಅಭಿಷೇಕ್ ಎಂಬ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂಬ ಮಾತು ಕೇಳಿಬಂದಿದೆ. ಆದರೆ ವಿಶ್ವ ವಿದ್ಯಾಲಯ ಈ ಆರೋಪವನ್ನು ನಿರಾಕರಿಸಿದ್ದು, ವಿದ್ಯಾರ್ಥಿ ಸಾವಿನ ಬಗ್ಗೆ ಪ್ರಕಟಣೆ ಹೊರಡಿಸಿದೆ.

ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿ ಅಭಿಷೇಕ್ ಸಾವು ನಮಗೂ ನೋವು ತಂದಿದೆ. ಇದು ದುರದೃಷ್ಟಕರ ಸಂಗತಿ. ಆದರೆ ವಿದ್ಯಾರ್ಥಿ ಪ್ರತಿಭಟನೆ, ಉಪವಾಸ ಸತ್ಯಾಗ್ರಹದ ವೇಳೆ ಮೃತಪಟ್ಟಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

ಅಬಿಷೇಕ್ ಫೆ.23, 24ರಂದು ನಡೆದ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿರಲಿಲ್ಲ. ಆತ ಕಾಲೇಜು ವಾರ್ಷಿಕ ಉತ್ಸವದಲ್ಲಿ ಭಾಗವಹಿಸಿದ್ದ. ಈ ವೇಳೆ ಕುಸಿದು ಬಿದ್ದಿದ್ದಾನೆ. ತಕ್ಷಣ ನಾವು ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದೆವು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ ಎಂದು ಸ್ಪಷ್ಟಪಡಿಸಿದೆ.

*7ನೇ ವೇತನ ಆಯೋಗ; ಸಿಎಂ ಧೋರಣೆಯಿಂದ ಸರ್ಕಾರಿ ನೌಕರರಿಗೆ ಬೇಸರ*

https://pragati.taskdun.com/7th-pay-commissionstate-govt-employeesprotestmarch-1st/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button