ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಸಚಿವ ಸಂಪುಟಕ್ಕೂ ಸೋಂಕು ವಕ್ಕರಿಸಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ವಾರಂಟೈನ್ ಆಗಿದ್ದಾರೆ.
ಈ ಕುರಿತು ಸ್ವತ: ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದು, ಕೋವಿಡ್ ಲಘು ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಇಂದು ಕೋವಿಡ್ ಟೆಸ್ಟ್ ಗೆ ಒಳಪಟ್ಟಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದು, ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
10 ಸಚಿವರು, 20 ಶಾಸಕರಿಗೂ ಕೊರೊನಾ ಸೋಂಕು
ಬೆಳಗಾವಿ: ನೂತನ ಪೊಲೀಸ್ ಆಯುಕ್ತರ ಅಧಿಕಾರ ಸ್ವೀಕಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ