ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮಕ್ಕಳಿಗೆ ಮೊಟ್ಟೆ ಜೊತೆ ಬಾಳೆಹಣ್ಣನ್ನು ಕೊಡಲಾಗುತ್ತದೆ. ಮೊಟ್ಟೆ ತಿನ್ನಲೇಬೇಕು ಎಂದು ಮಕ್ಕಳ ಮೇಲೆ ಒತ್ತಡ ಇಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ, ಪ್ರೋಟಿನ್ ಯುಕ್ತ ಆಹಾರ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ಹಾಗಾಗಿ ಮೊಟ್ಟೆ, ಬಾಳೆಹಣ್ಣು ಆಯ್ಕೆ ಮಾಡಲಾಗಿದೆ. ತಜ್ಞರು ಒಪ್ಪಿದರೆ ಮುಂದಿನ ದಿನಗಳಲ್ಲಿ ಯೋಜನೆ ಜಾರಿಯಾಗಲಿದೆ ಎಂದರು.
ಅನೇಕ ವರ್ಷಗಳಿಂದ ರಾಜ್ಯದಲ್ಲಿ ಶಿಕ್ಷಕರ ಕೊರತೆಯಿದೆ. ಹಾಗಾಗಿ ಶೀಘ್ರದಲ್ಲಿಯೇ 15,000 ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತಿದೆ. ಶಾಲಾ ಕೊಠಡಿಗಳ ಕೊರತೆ ಕೂಡ ಇದ್ದು, ಅದನ್ನು ಸರಿಪಡಿಸಲಾಗುತ್ತದೆ. ಮುಂದಿನ ವರ್ಷ ಅಕಾಡೆಮಿ ಕೇರ್ ಒಳಗಡೆ ಎನ್ ಇಟಿ ಅನುಷ್ಟಾನಕ್ಕೆ ತರಲಾಗುತ್ತದೆ ಎಂದು ಹೇಳಿದರು.
ಕೋವಿಡ್ ಕಾರಣದಿಂದ ಮತ್ತೆ ಶಾಲೆ ಮುಚ್ಚುವ ಪ್ರಶ್ನೆಯೇ ಇಲ್ಲ. ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಆತಂಕಪಡಬೇಕಿಲ್ಲ. 1 ಕೋಟಿ 20 ಲಕ್ಷ ಮಕ್ಕಳಲ್ಲಿ 102 ಮಕ್ಕಳಿಗೆ ಮಾತ್ರ ಸೋಂಕು ಕಂಡುಬಂದಿದೆ. ಪಾಸಿಟಿವ್ ಬಂದಿರುವುದು ವಸತಿ ಶಾಲೆಗಳಲ್ಲಿ ಬೇರಾವ ಶಾಲೆಗಳಲ್ಲಿ ಸೋಂಕು ಪತ್ತೆಯಾಗಿಲ್ಲ. ಪಾಸಿಟಿವ್ ಬಂದ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.
ವಿದ್ಯಾನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದ ಕೃಷಿ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ