ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮದರಸಾಗಳಲ್ಲಿ ಇಂದು ವೃತ್ತಿಪರ ಶಿಕ್ಷಣ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಮದರಸಾಗಳು ಕೇಳಿದರೆ ಔಪಚಾರಿಕ ಶಿಕ್ಷಣ ನೀಡಲು ನಾವು ಸಿದ್ಧ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು ಎಂಬುದು ನಮ್ಮ ಆಶಯ. ಮದರಸಾಗಳಲ್ಲಿ ಇಂದಿನ ಕಾಲಕ್ಕೆ ಅಗತ್ಯ ಶಿಕ್ಷಣ ನೀಡಲಾಗುತ್ತಿಲ್ಲ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇಂದಿನ ಶಿಕ್ಷಣ ಪದ್ಧತಿಯಿಂದ ದೂರ ಉಳಿಯುವಂತಾಗಬಾರದು. ಆ ನಿಟ್ಟಿನಲ್ಲಿ ಮದರಸಾಗಳಲ್ಲಿಯೂ ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನಮ್ಮ ಉದ್ದೇಶ ಎಂದರು.
ಮದರಸಾಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅನುದಾನ ನೀಡುತ್ತಿದೆ. ಅನುದಾನ ಪಡೆಯುತ್ತಿರುವ ಮದರಸಾಗಳಲ್ಲಿ ಔಪಚಾರಿಕ ಶಿಕ್ಷಣ ನೀಡಲಾಗುತ್ತಿದೆ. ವೃತ್ತಿಪರ ಶಿಕ್ಷಣ ನೀಡುವುದಕ್ಕೆ ನಾವು ಪ್ರಯತ್ನ ಮಾಡುತ್ತೇವೆ ಎಂದರು.
ಒಂದಷ್ಟು ಕಡೆಗಳಲ್ಲಿ ಮದರಸಾಗಳನ್ನು ಶಿಕ್ಷಣ ಪದ್ಧತಿಯಲ್ಲಿ ತರುವ ಪ್ರಯತ್ನ ನಡೆದಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಕೂಡ ನಮ್ಮ ಎಲ್ಲಾ ಮಕ್ಕಳಂತೆ ಈ ಶಿಕ್ಷಣ ಪದ್ಧತಿಗೆ ಬರಬೇಕು. ಈ ನಿಟ್ತಿನಲ್ಲಿ ಅಲ್ಪಸಂಖ್ಯಾತ ನಾಯಕರ ಗಮನಕ್ಕೂ ತರಲಾಗಿದೆ. ಅಲ್ಪಸಂಖ್ಯಾತರಿಗೆ ಈ ದೇಶದಲ್ಲಿ ಒಂದಷ್ಟು ಅವಕಾಶ ಮಾಡಿಕೊಟ್ಟಿದ್ದೀವಿ ಆ ಪ್ರಕಾರವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.
ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರು ಸಜೀವ ದಹನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ