
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಶಿಕ್ಷಕರ ವೃತ್ತಿಗೆ ಸೇರುವಾಗ ಜಿಲ್ಲಾವಾರು ಆಯ್ಕೆ ಬಗ್ಗೆ ಗೊತ್ತಿರಲಿಲ್ಲವೇ? ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವುದು ಮುಖ್ಯ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಸಚಿವರು ಶಿಕ್ಷಕರ ವರ್ಗಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಿಂತಿತ್ತು. ಕಳೆದ ಎರಡು ದಿನಗಳಿಂದ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭವಾಗಿದೆ. ಆದರೆ ಕೆಲವೈಯಕ್ತಿಕ ಸಮಸ್ಯೆಗಳನ್ನು ಮುಂದಿಟ್ಟು ವರ್ಗಾವಣೆ ಸರಿಯಲ್ಲ. ವೈಯಕ್ತಿಕ ಸಮಸ್ಯೆಯನ್ನು ಸಾಮೂಹಿಕ ಸಮಸೆಗಳೆಂದು ಬಿಂಬಿಸಲಾಗದು. ಶಿಕ್ಷಕ ವೃತ್ತಿಗೆ ಸೇರುವಾಗ ಜಿಲ್ಲಾವಾರು ಆಯ್ಕೆ ಗೊತ್ತಿರಲಿಲ್ಲವೇ? ನಾವು ಶಿಕ್ಷಕರನ್ನು ನೇಮಕ ಮಾಡುವುದು ಮಕ್ಕಳಿಗೆ ಪಾಠ ಮಾಡಲಿಕ್ಕೆ ಹೊರತು ಸಂಸಾರ ನೋಡಿಕೊಳ್ಳುವುದಕ್ಕಲ್ಲ ಎಂದು ಖಾರವಾಗಿ ಹೇಳಿದ್ದಾರೆ.
ಇದೇ ವೇಳೆ ಸದ್ಯದಲ್ಲಿಯೇ 5000 ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಹೊಸ ಶಿಕ್ಷಣ ನೀತಿ ಬಗ್ಗೆ ಅನಗತ್ಯ ಆರೋಪ ಸರಿಯಲ್ಲ. ಮಾತೃ ಭಾಷೆಗೆ ಹೊಸ ಶಿಕ್ಷಣ ನೀತಿಯಲ್ಲಿ ಆದ್ಯತೆ ನೀಡಲಾಗುತ್ತಿದೆ. ಡಾ.ಕಸ್ತೂರಿ ರಂಗನ್ ನೇತೃತ್ವದಲ್ಲಿ ಹೊಸ ಸಿಕ್ಷಣ ನೀತಿ ರೂಪಿಸಲಾಗಿದೆ ಎಂದು ಹೇಳಿದರು.
ಕನ್ನಡ ಗೀತಗಾಯನ: ಮುಗಿಲು ಮುಟ್ಟಿದ ಕನ್ನಡ ಡಿಂಡಿಮ…