Latest

ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕೇಂದ್ರದ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಸೆ.27ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಬೆಂಬಲ ನೀಡಿದೆ ಎಂದು ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ.

Home add -Advt

ಅಗತ್ಯವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರು ಜೀವನ ನಡೆಸುವುದು ದುಸ್ಥರವಾಗಿದೆ. ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುತ್ತಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿದೆ ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಸೆ.27ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ನಮ್ಮ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸುತ್ತಿವೆ ಎಂದು ತಿಳಿಸಿದ್ದಾರೆ.

ಶಿಕ್ಷಕರ ನೇಮಕಾತಿ; ಅರ್ಜಿ ಆಹ್ವಾನ

Related Articles

Back to top button