Latest

ಕೃಷಿ ಸಚಿವರ ದರ್ಬಾರ್; ಮನೆಗೆ ವೈದ್ಯರನ್ನು ಕರೆಸಿ ಲಸಿಕೆ ಪಡೆದ ‘ಕೌರವ’

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಸ್ಪತ್ರೆ ಸಿಬ್ಬಂದಿಗಳನ್ನು ಮನೆಗೆ ಕರೆಸಿಕೊಂಡು ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ನಿನ್ನೆ ಆಸ್ಪತ್ರೆಗೆ ತೆರಳಿ ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ವೃದ್ಧರು, ಹಿರಿಯ ನಾಗರಿಕರು ಬಿಸಲ್ಲಿ ನಿಂತು, ಗಂಟೆಗಟ್ಟಲೇ ಕಾದು ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಕೃಷಿ ಸಚಿವರಾಗಿರುವ ಬಿ.ಸಿ.ಪಾಟೀಲ್ ಮಾತ್ರ ಆಸ್ಪತ್ರೆಗೆ ಹೋಗದೇ ಮನೆಗೇ ವೈದ್ಯರನ್ನು ಕರೆಸಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಬಿ.ಸಿಪಾಟೀಲ್ ದೌಲತ್ತಿನ ನಡೆ ಇದೀಗ ಸಾಮಾಜಿಕ ಜಾಲತಾಣಗಳ್ಲಿ ವೈರಲ್ ಆಗಿದೆ.

Related Articles

ಜವಾಬ್ದಾರಿಯುತ ಮಂತ್ರಿಯಾಗಿ ಸಮಾಜಕ್ಕೆ ಮಾದರಿಯಾಗುವ ಮೂಲಕ ಕೊರೊನಾ ಸೋಂಕಿನ ಬಗ್ಗೆ, ಲಸಿಕೆ ಹಾಕಿಸಿಕೊಳ್ಳುವುದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾದವರು ಇಂದು ದರ್ಬಾರ್ ನಡೆಸುತ್ತಿರುವುದು ಕೆಂಗಣ್ಣಿಗೆ ಗುರಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button