Latest

ಕೃಷಿ ಸಚಿವರಿಗೆ ಕೊರೊನ ಸೋಂಕು; ದೇವರ ಮೊರೆ ಹೋದ ಅಭಿಮಾನಿಗಳು

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಕೃಷಿ ಸಚಿವ ಬಿ.ಸಿ ಪಾಟೀಲ್ ಅವರಿಗೂ ಕೊರಿನಾ ಸೋಂಕು ದೃಢಪಟ್ಟಿದ್ದು, ಈ ವರೆಗೆ ರಾಜ್ಯದ ಮೂವರು ಮಂತ್ರಿಗಳಿಗೆ ಕೊರೊನಾ ಸೋಂಕು ತಗುಲಿದೆ. ಕೃಷಿ ಸಚಿವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರ ಅಭಿಮಾನಿ ಬಳಗ ಸಚಿವರು ಮತ್ತು ಕುಟುಂಬ ವರ್ಗದವರು ಬೇಗ ಗುಣ ಮುಖರಾಗಲೆಂದು ದೇವರಮೊರೆ ಹೋಗಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿರುವ ಶ್ರೀ ಕೋಟೆ ಆಂಜನೇಯ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿ.ಸಿ.ಪಾಟೀಲ್ ಅಭಿಮಾನಿ ಬಳಗದ ಬಸನಗೌಡ ಕಕ್ಕರಗೊಳರವರ ನೇತೃತ್ವದಲ್ಲಿ ಸಚಿವರು ಕೊರೊನಾ ಸೋಂಕಿನಿಂದ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಕೃಷಿ ಸಚಿವ ಬಿ.ಸಿ.ಪಾಟೀಲ್ ಪತ್ನಿ, ಅಳಿಯ ಹಾಗೂ ಅವರ ನಿವಾಸದ ಸಿಬ್ಬಂದಿ ಸೇರಿ ಒಟ್ಟು ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದು, ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗ ಸೇರಿದಂತೆ ಒಟ್ಟು ಐವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button